ಮೈಸೂರು: ಮೈಸೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ. ಪಬ್ ವೊಂದರಲ್ಲಿ ಭೇಟಿಯಾದ ಇಬ್ಬರು ವ್ಯಕ್ತಿಗಳು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವುದಾಗಿ ವರದಿಯಾಗಿದೆ.
ಭಾನುವಾರ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಗರದ ಪಬ್ ವೊಂದರಲ್ಲಿ ಆರೋಪಿಗಳು ಹಾಗೂ ಮಡಿಕೇರಿ ಮೂಲದ ಯುವತಿ ಭೇಟಿಯಾಗಿದ್ದಾರೆ. ಬಳಿಕ ದುಷ್ಕರ್ಮಿಗಳು ಆಕೆಗೆ ಆಮಿಷವೊಡ್ಡುವ ಮೂಲಕ ಪ್ರತ್ಯೇಕ ಸ್ಥಳವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.
2021 ರ ಆಗಸ್ಟ್ 24 ರಂದು ನಡೆದ ಗ್ಯಾಂಗ್ ರೇಪ್ ಘಟನೆ ನಂತರ ಮತ್ತೆ ಅಂತಹುದೇ ಘಟನೆ ಮರುಕಳಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಈ ಪ್ರಕರಣಕ್ಕೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಆರೋಪಿ ಕೊಡಗು ಮೂಲದವನಾದರೆ, ಇನ್ನೊಬ್ಬ ಮೈಸೂರಿನವನು ಎಂದು ಹೇಳಲಾಗಿದೆ.