ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ ಎಂದರು.
![](https://udupixpress.com/wp-content/uploads/2024/11/1000045485-1024x378.jpg)
ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಗೌರವಾಧ್ಯಕ್ಷ ವಿಶ್ವನಾಥ್ ಶೆಣೆೈ, ಶಾರದಾ ಕೃಷ್ಣ ಪ್ರಶಸ್ತಿ ಸಮಿತಿಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ನ ಸದಸ್ಯ ವೈಕುಂಠ ಹೇರಳೆ, ಪ್ರತಿಷ್ಠಾನದ ಗೌರವ ಸಲಹೆಗಾರ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.