ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಡುಪಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಚನ್ನಪಟ್ಟಣಕ್ಕೆ ಇಂದು (ಅ.23) ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಉಳಿದಂತೆ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಮಗಳಾದ ವೈಶಾಲಿ ಕುಲಕರ್ಣಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ಈ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಕಾಂಗ್ರೆಸ್ ಮಣೆಹಾಕಿದೆ.