ರಾಜ್ಯದಲ್ಲಿ ಜೂನ್ ಮೊದಲನೇ ವಾರದಲ್ಲಿ ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಜೂನ್ ಮೊದಲ ವಾರದಲ್ಲಿ ಅಂದರೆ ಅಂದಾಜು ಜೂ.5ರಂದು ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆಗಳಿವೆ. ಕಳೆದ ವರ್ಷ ರಾಜ್ಯದಲ್ಲಿ ಬರ ಉಂಟಾಗಿದ್ದ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ಮುಂಗಾರು ಪ್ರವೇಶ ವಾಗಿ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿತ್ತು.
ಈ ಬಾರಿ ವಾಡಿಕೆಯಷ್ಟು ಮಳೆ ಸುರಿಯುವ ಸಾಧ್ಯತೆಗಳಿವೆ. ಸುಮಾರು ಮೇ 22ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ತಜ್ಞರು ತಿಳಿಸಿದ್ದಾರೆ.