ಉಡುಪಿ: ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರುವುದರೊಂದಿಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 01 ಕೊನೆಯ ದಿನ. ಅರ್ಜಿ ನಮೂನೆಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಉಡುಪಿ ಕಛೇರಿಯನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಏ. 6 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 16 ರಂದು ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.












