ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ವೆಬ್ಸೈಟ್ https://ssp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://ssp.karnataka.gov.in, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.