ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.