ಉಡುಪಿ: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಶಂಕರಪುರ ಸಮೀಪದ ಅರಸಿಕಟ್ಟೆ ದುರ್ಗಾ ನಗರದಲ್ಲಿ ಸಂಭವಿಸಿದೆ.
ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ್ (55) ಎಂದು ಗುರುತಿಸಲಾಗಿದೆ.
ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದ್ದು, ಇದರ ಅಡಿಯಲ್ಲಿ ಸಿಲುಕಿದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












