ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾರ ಕೇಸ್ ದಾಖಲು.

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಎರಡು ಕೇಸ್ ದಾಖಲಾಗಿರುವ ಮುನಿರತ್ನ ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾಋ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂಕೆ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್ ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿರುವ, ಬಿಜೆಪಿಯಲ್ಲೂ ಸಕ್ರಿಯವಾಗಿರುವ ತನ್ನ ಮೇಲೆ 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ ಹನಿಟ್ರ್ಯಾಪ್ ಗೆ ಬಳಸಿಕೊಂಡಿರುವ ಕುರಿತು ದೂರು ನೀಡಿದ್ದಾರೆ. ದೂರು ಪರಿಶೀಲಿಸಿದ ನಂತರ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಪೊಲೀಸರು ಘಟನೆ ನಡೆದ ಸ್ಥಳಕ್ಕೆ ತೆರಳಿ ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.