ಉಡುಪಿ: ಶಿರ್ವ -ಕಟಪಾಡಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ಉದ್ದಕ್ಕೂ ಹೊಂಡ ಗುಂಡಿಗಳು ಬಿದ್ದಿವೆ. ನಿತ್ಯ ವಾಹನ ಸವಾರರು ಸರ್ಕಸ್ ಮಾಡಿಕೊಂಡೆ ಹೋಗಬೇಕಾದ ದುಸ್ಥಿತಿ ನಿರ್ಮಾಣಗೊಂಡಿದೆ.
ಇಂದು ಮುಂಜಾನೆ ಶಂಕರಪುರ ಸಾಲ್ಮರ್ ಸಮೀಪ ಶಿರ್ವಾ ದಿಂದ ಕಟಪಾಡಿ ಕಡೆಗೆ ಹೋಗುತ್ತಿದ್ದ ಶಿಫ್ಟ್ ಕಾರೊಂದು ಹೊಂಡ ತಪ್ಪಿಸಲು ಹೋಗಿ ಕಂದಕಕ್ಕೆ ಬಿದ್ದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹದಗೆಟ್ಟ ರಸ್ತೆಯಿಂದಾಗಿ ಈ ಮಾರ್ಗದಲ್ಲಿ ಪ್ರತಿದಿನ ಒಂದಲ್ಲ ಒಂದು ಅಪಘಾತ ನಡೆಯುತ್ತಲೇ ಇದೆ. ಲೋಕೋಪಯೋಗಿ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡ ಇತ್ತ ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.