ಶ್ರೀ ರಾಮಾಶ್ರಮ ಪದವಿ ಪೂರ್ವ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ಮಂಗಳೂರು : ತ್ರಿಶಾ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಮಾಶ್ರಮ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವು ಜೂನ್ 10 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ.ನಾರಾಯಣ್ ಕಾಯರ್ ಕಟ್ಟೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಶಿಕ್ಷಣ ಅಂದರೆ ಬರೀ ಅಂಕಗಳನ್ನು ಗಳಿಸುವುದು ಮಾತ್ರ ಅಲ್ಲ ಅದರ ಜೊತೆಗೆ ಸರ್ವತೋಮುಖ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇರಬೇಕು. ಜ್ಞಾನದ ಹಸಿವು ಇದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಹಾಗೂ ಶಿಕ್ಷಣದ ಜೊತೆಗೆ ಆತ್ಮಗೌರವವನ್ನು ಬೆಳೆಸಿಕೊಳ್ಳುವುದು ಮುಖ್ಯ ಎಂದರು.

ರಾಮಾಶ್ರಮ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಯಶಸ್ವಿನಿ ಯಶ್ ಪಾಲ್ ಕಾಲೇಜಿನ ನಿಯಮಗಳನ್ನು ವಿವರಿಸಿದರು. ಪ್ರಾಧ್ಯಾಪಕರಾದ ಡಾ. ಮರೀನಾ ಸೀಮಾ ಸಿಕ್ವೇರಾ ನಿರೂಪಿಸಿ, ಶಿವಾನಿ ವಂದಿಸಿದರು.

ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜೆಂಟ್ ಮಂಗಳೂರಿನ ಪ್ರಾಂಶುಪಾಲರಾದ ಪ್ರೊಫೆಸರ್ ಮಂಜುನಾಥ್ ಕಾಮತ್ ಎಮ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುಪ್ರಭಾ ಎಮ್, ವಿದ್ಯಾರ್ಥಿಗಳು ಮತ್ತು ಪೋಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.