ಕುಂದಾಪುರ: ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಜೂನ್ 01 ರಂದು ಸಿಎ ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು.
ಸಿಎ ಗೋಪಾಲ ಕೃಷ್ಣ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್ ಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಹಾಗೆಯೇ ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಕೌಶಲ್ಯ ಮುಖ್ಯ, ವಿದ್ಯಾರ್ಥಿಗಳು ಮನಸ್ಸಿನಲ್ಲಿ ಕೀಳರಿಮೆ ಬೆಳಸಿ ಕೊಳ್ಳದೆ ಸಾಧನೆಯ ಜೀವನ ನಿಮ್ಮದಾಗಬೇಕು ಎನ್ನುವ ಕಿವಿ ಮಾತನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲೆಕ್ಕ ಶಾಸ್ತ್ರ ಉಪನ್ಯಾಸಕ ಸುಶಾಂತ್ ನಾಯಕ್, ಸಿಎ ಗೋಪಾಲಕೃಷ್ಣ ಭಟ್ ಅವರನ್ನು ಪರಿಚಯಿಸಿದರು. ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಶಾಸ್ತ್ರ ಉಪನ್ಯಾಸಕಿ ನಿಧಿ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.