ಬೆಂಗಳೂರು: ‘ಬಿಗ್ ಬಾಸ್ ಕನ್ನಡ 11’ರ ಆಟಕ್ಕೆ ತೆರೆಬಿದ್ದಿದೆ. ಹಳ್ಳಿ ಹೈದ ಹನುಮಂತ ಬಿಗ್ ಬಾಸ್ 11ರ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದಿದ್ದ ಹನುಮಂತ್ ವಿನ್ನರ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಬಿಗ್ ಬಾಸ್ ಆಟ ಶುರುವಾಗಿ 4 ವಾರ ಕಳೆದ ಮೇಲೆ ಸ್ಪರ್ಧಿಯಾಗಿ ದೊಡ್ಮನೆಗೆ ಹನುಮಂತ ಕಾಲಿಟ್ಟರು. ಮನೆಯ ಜಗಳ ನೋಡಿ ಹನುಮಂತು ಬೆಚ್ಚಿಬಿದ್ದಿದ್ದರು. ಆದರೂ ಛಲ ಬಿಡದೇ ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿ ಫಿನಾಲೆಗೆ ಮೊದಲು ಆಯ್ಕೆಯಾದರು. ಈಗ ಪರಾಕ್ರಮ ಮೆರೆದ ತ್ರಿವಿಕ್ರಮ್‌ಗೆ ಮಣ್ಣು ಮುಕ್ಕಿಸಿ ವಿನ್ನರ್ ಆಗಿ ಹನುಮಂತು ಹೊರಹೊಮ್ಮಿದ್ದಾರೆ. ಜೊತೆಗೆ 50 ಲಕ್ಷ ರೂಪಾಯಿ ತಮ್ಮದಾಗಿಸಿಕೊಂಡಿದ್ದಾರೆ.












