ಉಡುಪಿ, ಆಗಸ್ಟ್ 16: ಹಿರಿಯಡ್ಕ ನಿವಾಸಿ ರಾಘವೇಂದ್ರ (44) ಎಂಬ ವ್ಯಕ್ತಿಯು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.