ಹೆಬ್ರಿ: ನಿಟ್ಟೆ ವಿಶ್ವವಿದ್ಯಾನಿಲಯದ ನಿವೃತ್ತ ದೈಹಿಕ ನಿರ್ದೇಶಕರು ರಾಜಾರಾಮ್ ಶೆಟ್ಟಿ, ಇವರು ಎಸ್.ಆರ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹೆಬ್ರಿ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹೆಚ್ ನಾಗರಾಜ ಶೆಟ್ಟಿ, ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.