ಹೆಬ್ರಿ: ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ; ಪ್ರಕರಣ ದಾಖಲು

ಉಡುಪಿ, ನ.9: ವ್ಯಕ್ತಿಯೊಬ್ಬರಿಗೆ ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇಖರ(77) ಎಂಬವರ ಮೊಬೈಲ್‌ಗೆ ನ.7ರಂದು ಕೆನರಾ ಬ್ಯಾಂಕ್‌ನವರು ಎಂದು ಹೇಳಿ ಕರೆ ಮಾಡಿ, ಕೆವೈಸಿ ಅಪ್‌ಡೇಟ್ ಆಗದೆ ಅಕೌಂಟ್ ಬ್ಲಾಕ್ ಮಾಡುವುದಾಗಿ ತಿಳಿಸಿದ್ದರು. ಬಳಿಕ ಶೇಖರ ಅವರಿಂದ ಖಾತೆ ವಿವರ, ಓಟಿಪಿ ಪಡೆದುಕೊಂಡ ಅಪರಿಚಿತರು, 51,908ರೂ. ಹಣವನ್ನು ಖಾತೆಯಿಂದ ಮೋಸದಿಂದ ಡ್ರಾ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.