ಹೆಬ್ರಿ: ಮಕ್ಕಳ ಪ್ರತಿಭೆಗಳು ಅನಾವರಣಗೊಳ್ಳಲು ಪಠ್ಯೇತರ ಚಟುವಟಿಕೆಯಲ್ಲಿ ತಮ್ಮ ಮಕ್ಕಳನ್ನು ತೊಡಗಿಸಿಬೇಕು. ಭಾರತೀಯ ರಂಗ ಕಲೆಗಳನ್ನು ಅಧ್ಯಯನ ಮಾಡಿದರೆ ಮಾನಸಿಕವಾಗಿ ಸದೃಡರಾಗಲು ಸಾಧ್ಯ ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಎಲ್ಲಾ ಕಲಾಪ್ರಕಾರಗಳನ್ನು ಒಂದೇ ಸೂರಿನಡಿ ತರಬೇತಿ ನೀಡುವುದರ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆಗಳನ್ನು ಹೊರತರಲು ಸಹಕಾರಿಯಾಗಿದೆ ಎಂದು ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ ಹೇಳಿದರು.
ಅವರು ಹೆಬ್ರಿ ಎಸ್.ಆರ್.ಬಳಿ ಇರುವ ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆರಂಭಗೊಂಡ ಯಕ್ಷಗಾನ ತರಗತಿಯನ್ನು ಭಾಗವತಿಗೆಯ ಮೂಲಕ ಚಾಲನೆ ನೀಡಿ ಮಾತನಾಡಿದರು.
ಭಾಷೆಯಲ್ಲಿ ಹಿಡಿತವಿರುವ ಯಕ್ಷಗಾನ ಕಲೆ ಉಳಿಸಿ ಬೆಳಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು. ಈ ನಿಟ್ಟಿನಲ್ಲಿ ಚಾಣಕ್ಯಸಂಸ್ಥೆ ಕಳೆದ 10 ವರ್ಷಗಳಿಂದ ಕಲಾ ಪ್ರಕಾರಗಳೆಲ್ಲವನ್ನು ತರಬೇತಿ ನಿಡುವುದರ ಜತೆಗೆ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಈ ಭಾರಿ ಯಕ್ಷಗಾನ ಕಲೆಯನ್ನು ತರಬೇತಿ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಉದ್ಯಮಿ ಚಾರ ವಾದಿರಾಜ್ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮೂಡುಬಿದಿರೆ ತಾ| ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಮಾತನಾಡಿ ಗುಣಮಟ್ಟದ ತರಬೇತಿ ಮೂಲಕ ಗುರುತಿಸಿಕೊಂಡ ಚಾಣಕ್ಯ ಸಂಸ್ಥೆ ಕಲೆಯ ಎಲ್ಲಾ ಪ್ರಕಾರಗಳನ್ನು ತರಬೇತಿ ನೀಡುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು. ಯಕ್ಷಗಾನ ಸಂಘಟಕ ದಯಾನಂದ ಶೆಟ್ಟಿ ಮಾತನಾಡಿ ವಿಶ್ವಗಾನವಾದ ಯಕ್ಷಗಾನ ಕಲೆಯನ್ನು ಮಕ್ಕಳಿಗೆ ತರಬೇತಿ ನೀಡಿ ಮಕ್ಕಳಲ್ಲಿ ಯಕ್ಷಗಾನ ಕಲೆಯ ಆಸಕ್ತಿ ಬರಿಸುವ ಕಾರ್ಯ ಶ್ಲಾಘನೀಯವಾಗಿದ್ದು ಪೋಷಕರು ತಮ್ಮ ಮಕ್ಕಳನ್ನು ಸೇರಿಸಿ ಬೆಂಬಲಿಸಿ ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸಿ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಚಾಣಕ್ಯ ಏಜ್ಯುಕೇಶನ್ & ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮಾತನಾಡಿ ಚಾಣಕ್ಯ ಸಂಸ್ಥೆ ಕಳೆದ 10ವಷ೯ಗಳಿಂದ ಕಲೆಯ ಎಲ್ಲಾ ಪ್ರಕಾರಗಳನ್ನು ತರಬೇತಿ ನಿಡುವುದರ ಜತೆಗೆ ಉಚಿತ ಚೆಸ್ ತರಗತಿ ಹಾಗೂ ಸರಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶೇ.50 ರಿಯಾಯಿತಿ ದರದಲ್ಲಿ ಚಿತ್ರಕಲಾ ತರಬೇತಿ ನೀಡುತ್ತಿದೆ. ಅಲ್ಲದೆ ಆಯ್ದ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಹಾಗೂ ಇತರ ಕಲಾ ತರಗತಿಯನ್ನು ಉಚಿತವಾಗಿ ನೀಡಿ ಅವರಲ್ಲಿರುವ ಆಸಕ್ತಿಗೆ ಸೂ ವೇದಿಕೆ ಕಲ್ಪಿಸಲಾಗುತ್ತದೆ. ಅದೇ ಪ್ರತಿಯೊಬ್ಬರ ಯಕ್ಷಗಾನ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಫೆ.29ರ ಒಳಗೆ ಪ್ರವೇಶ ಪಡೆದವರಿಗೆ ರೂ.1000 ಪ್ರವೇಶ ಶುಲ್ಕ ಉಚಿತವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಚಾಣಕ್ಯ ಮೇಲೋಡಿಸ್ ನ ಗಾಯಕ ನಿತ್ಯಾನಂದ ಭಟ್ ಪ್ರಾಥಿ೯ಸಿದರು. ಉದಯಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ.ಯು ಶೆಟ್ಟಿ ವಂದಿಸಿದರು.