ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ.

ಹೆಬ್ರಿ: ಕಳೆದ ಹತ್ತು ವರ್ಷಗಳಿಂದ ಪಠ್ಯದ ಜತೆ ಪಟ್ಟಿಯ ತರ ಚಟುವಟಿಕೆಗಳಿಗೆ ತರಬೇತಿ ನೀಡಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ನಿರಂತರವಾಗಿ ವೇದಿಕೆ ಕಲ್ಪಿಸುತ್ತಿರುದು ಶ್ಲಾಘನೀಯ ಎಂದು ಮುದ್ರಾಡಿ ನೇತಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಸಂತೋಷ್ ಪೂಜಾರಿ ಬಲ್ಲಾಡಿ ಹೇಳಿದರು.

ಅವರು ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿಯ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ನಡೆದ 8ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ನೇತಾಜಿ ಫ್ರೆಂಡ್ಸ್ ಕ್ಲಬ್ ನಿಂದ ನಿರಂತರ ಸಹಕಾರ:

ಕಳೆದ ಏಳು ವರ್ಷಗಳಿಂದ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಚಿತ್ರಕಲಾ ತರಬೇತಿಯನ್ನು ನೀಡುತ್ತಿರುವ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿರುವ ಚಾಣಕ್ಯ ಸಂಸ್ಥೆಯ ಜೊತೆ ನೇತಾಜಿ ಫ್ರೆಂಡ್ಸ್ ಕ್ಲಬ್ ಯಾವಾಗಲೂ ಇದೆ ಎಂದರು.

ಸರಕಾರಿ ಶಾಲೆಯ ಮಕ್ಕಳಿಗೆ ರಿಯಾಯಿತಿ:

ಸಮಾರಂಭದ ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು. ಶೆಟ್ಟಿ ವಹಿಸಿ ಮಾತನಾಡಿ ಕಳೆದ ಏಳು ವರ್ಷಗಳಿಂದ ಸರಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಚಿತ್ರಕಲಾ ತರಬೇತಿ ನೀಡುತ್ತಿರುವ ನಮ್ಮ ಸಂಸ್ಥೆ ಈ ಬಾರಿ ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಚಿತ್ರಕಲಾ ಪ್ರವೇಶ ಸ್ವಲ್ಪ ಸಂಪೂರ್ಣ ಉಚಿತ ಮಾಡಿದ್ದು ತರಬೇತಿ ಶುಲ್ಕದಲ್ಲಿ ಶೇಕಡ 50 ರಿಯಾಯಿತಿಯನ್ನು ನೀಡಲಾಗುತ್ತಿದೆ. ಹಾಗೂ ಕಳೆದ 10 ವರ್ಷಗಳಿಂದ ಉಚಿತ ಭೇಟಿಯನ್ನು ನೀಡುತ್ತಿದ್ದು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ಭರತನಾಟ್ಯ, ಕರಾಟೆ, ಶಾಸ್ತ್ರೀಯ ಸಂಗೀತ, ಡ್ಯಾನ್ಸ್ ಮೊದಲಾದ ತರತಿಗಳಿಗೆ ಪ್ರವೇಶ ಶುಲ್ಕದಲ್ಲಿ ಶೇಕಡ 50 ರಿಯಾಯಿತಿ ನೀಡಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಚಾಣಕ್ಯ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಮಾರಂಭದಲ್ಲಿ ಈಸಿ ಲೈಫ್ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಕಾರ್ತಿಕ್, ನೇತಾಜಿ ಫ್ರೆಂಡ್ಸ್ ಕ್ಲಬ್ ನ ಪ್ರಶಾಂತ್ ಪೈ, ವಿಶುಕುಮಾರ್, ಕರಾಟೆ ಗುರುಗಳಾದ ಸೋಮನಾಥ ಸುವರ್ಣ, ಡಾ. ವಿಜಯಲಕ್ಷ್ಮಿ ಆರ್. ನಾಯಕ್, ನಿತ್ಯಾನಂದ ಭಟ್, ವೇದಾ, ಸಿಂಚನ ಮೊದಲಾದವರು ಉಪಸ್ಥಿತರಿದ್ದರು.

ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಹೆಬ್ರಿ ಜೆಸಿಐ ಅಧ್ಯಕ್ಷೆ ರಕ್ಷಿತಾ ಪಿ. ಭಟ್ ವಂದಿಸಿದರು.

ಹೆಬ್ರಿ ತಾಲೂಕು ವ್ಯಾಪ್ತಿಯ ಸುಮಾರು 70 ಕ್ಕೆ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಸಬ್ ಜೂನಿಯರ್ ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಿತು.